


ಪ್ರತಿ ಜಿಲ್ಲೆಯ ವಾಣಿಜ್ಯೋದ್ಯಮ ಸಮಸ್ಯೆಗಳು ಬೇರೆಯಾಗಿರುತ್ತವೆ-ಅಶೋಕಸ್ವಾಮಿ ಹೇರೂರ
ಗದಗ:ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಾಣಿಜ್ಯೋದ್ಯಮ ಸಮಸ್ಯೆಗಳು ಬೇರೆ ಬೇರೆಯಾಗಿರುತ್ತವೆ ಎಂದು ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅದ್ಯಕ್ಷ ಅಶೋಕಸ್ವಾಮಿ ಹೇರೂರ ಹೇಳಿದರು.
ಗದಗ ಜಿಲ್ಲಾ ಚೇಂಬರ್ ಆಫ್ ಕಾಮರ್ಸ & ಇಂಡಸ್ಟ್ರಿ ಕಚೇರಿಯಲ್ಲಿ ದಿನಾಂಕ:26-09-2021 ರಂದು
ಆಯೋಜಿಸಲಾಗಿದ್ದ 16 ಜಿಲ್ಲೆಗಳ ವಾಣಿಜ್ಯೋದ್ಯಮ ಸಂಸ್ಥೆಗಳ ಅದ್ಯಕ್ಷ ಮತ್ತು ಕಾರ್ಯದರ್ಶಿಗಳ ಪ್ರತ್ಯೇಕ ಸಭೆಯಲ್ಲಿ ಅವರು ಮಾತನಾಡಿದರು.
ನೂತನವಾಗಿ ಉತ್ತರ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗಳ ಒಕ್ಕೂಟ ರಚನೆ ಮಾಡಬೇಕು ಎನ್ನುವ ನಿಟ್ಟಿನಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದ ಹೇರೂರ,
ಬೆಂಗಳೂರಿನ ಫ಼ೇಡರೇಷನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸನವರಿಗೆ ಕರ್ನಾಟಕ ರಾಜ್ಯದ ಬೌಗೋಳಿಕ ಮಾಹಿತಿ ಇಲ್ಲ , ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯವರಿಗೆ ಎಲ್ಲಾ ಜಿಲ್ಲೆಯ ವಾಣಿಜ್ಯೋದ್ಯಮ ಸಂಸ್ಥೆಗಳಿಗೆ ಮಾನ್ಯತೆ ನೀಡಿ, ಒಟ್ಟಾಗಿ ಹೋಗಬೇಕೆನ್ನುವ ಕಾರ್ಯತಂತ್ರವಿಲ್ಲ.
ಕಲ್ಯಾಣ ಕರ್ನಾಟಕ ಚೇಂಬರ್ ಆಫ್ ಕಾಮರ್ಸನವರು ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಸಮಸ್ಯೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆಯಾದರೂ ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ವಾಣಿಜ್ಯೋದ್ಯಮಿಗಳು ಕಲಬುರಗಿಯಲ್ಲಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸರಿಯಾದ ರಸ್ಥೆ ಇಲ್ಲ.
ವಾಣಿಜ್ಯೋದ್ಯಮ ಸಂಸ್ಥೆಗಳ ಒಕ್ಕೂಟ ಸ್ಥಾಪಿಸಲು ಕೊಪ್ಪಳ ಚೇಂಬರ್ ಆಫ್ ಕಾಮರ್ಸನಿಂದ ಯಾವುದೇ ಅಭ್ಯಂತರವಿಲ್ಲ.ಕೊಪ್ಪಳ ಜಿಲ್ಲೆಯ ಅಭಿವೃದ್ಧಿ ಕುರಿತಾದ ವಿಷಯಗಳಿಗೆ ಸ್ಪಂಧಿಸುವ ಸಂಸ್ಥೆಗಳ ಜೊತೆ ಕೈ ಜೋಡಿಸಲು ತಯಾರಿದ್ದೇವೆ ಎಂದು ಹೇಳಿದರು. ಕಾರ್ಯದರ್ಶಿ ಉದಯ ಕುಮಾರ ದರೋಜಿ ಉಪಸ್ಥಿತರಿದ್ದರು.