


ಕರಡಿ ಧಾಮ ಸರಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ.
ಗಂಗಾವತಿ: ಗಂಗಾವತಿ ತಾಲ್ಲೂಕಿನಲ್ಲಿ ಕರಡಿಗಳ ಸಂಖ್ಯೆ ಬಹಳಷ್ಟು ಇದ್ದು , ಅವು ಆಹಾರ ಹುಡುಕಿಕೊಂಡು ರಸ್ತೆಗೆ ಬರುತ್ತಿದ್ದು ,ವಾಹನಗಳ ಚಕ್ರಗಳಿಗೆ ಸಿಕ್ಕು ಬಿದ್ದು ಪ್ರಾಣ ಕಳೆದು ಕೊಳ್ಳುತ್ತಿವೆ ಅದಕ್ಕಾಗಿ ಈ ಭಾಗದಲ್ಲಿ ಕರಡಿ ಧಾಮ ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹಾಲಪ್ಪ ಆಚಾರ ಅವರಿಂದ ಅರಣ್ಯ ಸಚಿವರ ಕಚೇರಿಗೆ ಟಿಪ್ಪಣಿಯನ್ನು ಕಳುಹಿಸಲಾಗಿದೆ.
ಗಣಿ,ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ ಅವರ ನಿರ್ಧೇಶನದಂತೆ ಅವರ ಆಪ್ತ ಕಾರ್ಯದರ್ಶಿ ಡಾ.ನಂದನ್ ಕುಮಾರ ಜಿ.ವಿ., ಆರಣ್ಣ್ಯ ಸಚಿವರ ಆಪ್ತ ಕಾರ್ಯದರ್ಶಿಯವರಿಗೆ ಪತ್ರ ಬರೆದು ನಿಯಮನುಸಾರ ಅಗತ್ಯ ಕ್ರಮ ಕೈಗೊಳ್ಳಲು ಕೋರಿದ್ದಾರೆ.
ಗಂಗಾವತಿ ಭಾಗದ ಚಿಕ್ಕ ಬೆಣಕಲ್,ಹೀರೆ ಬೆಣಕಲ್, ಮುಕ್ಕುಂಪಿ ಮತ್ತು ಜಬ್ಬಲಗುಡ್ಡ ಭಾಗದಲ್ಲಿ ಕರಡಿ ಧಾಮ ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಸಚಿವ ಹಾಲಪ್ಪ ಆಚಾರ ಅವರಿಗೆ ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅದ್ಯಕ್ಷ ಅಶೋಕಸ್ವಾಮಿ ಹೇರೂರ ಈ ಹಿಂದೆ ಪತ್ರ ಬರೆದಿದ್ದರು.
ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹಾಲಪ್ಪ ಆಚಾರ ಅವರ ಕಚೇರಿಯಿಂದ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಆರಣ್ಣ್ಯ ಸಚಿವರ ಕಚೇರಿಗೆ ನಿರ್ದೇಶನ ಹೋಗಿದೆ.
ಈ ಬಗ್ಗೆ ಸ್ಥಳೀಯ ಶಾಸಕರು ಮುತುವರ್ಜಿವಹಿಸಬೇಕೆಂದು ಹೇರೂರ ಮನವಿ ಮಾಡಿದ್ದಾರೆ.