ಕೆ.ಕೆ.ಆರ್.ಡಿ.ಬಿ.ಯಿಂದ ಮ್ಯಾಚಿಂಗ್ ಗ್ರ್ಯಾಂಟ್ ನೀಡಲು,ದತ್ತಾತ್ರೇಯ ಪಾಟೀಲ್ ಗೆ ಒತ್ತಾಯ
ಗಂಗಾವತಿ: ಉದ್ದೇಶಿತ ಗಂಗಾವತಿ-ದರೋಜಿ ನೂತನ ರೇಲ್ವೆ ಕಾಮಗಾರಿಗೆ ರಾಜ್ಯದಿಂದ ಮ್ಯಾಚಿಂಗ್ ಗ್ರ್ಯಾಂಟ್ ನೀಡುವಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಅವರನ್ನು ಕಲಬುರ್ಗಿಯ ಹೈದ್ರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಒತ್ತಾಯಿಸಿದೆ.
ಸಂಸ್ಥೆಯ ಅದ್ಯಕ್ಷ ಪ್ರಶಾಂತ ಎಸ್.ಮಾನಕರ್ ಮತ್ತು ಕಾರ್ಯದರ್ಶಿ ಶರಣಬಸಪ್ಪ ಎಮ್.ಪಪ್ಪಾ
ಈ ಬಗ್ಗೆ ಶಾಸಕ ರೇವೂರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಗಂಗಾವತಿ-ದರೋಜಿ ರೇಲ್ವೆ ಲೈನ್ ಸಂಪರ್ಕ ಸಾದ್ಯವಾದರೆ,ಭತ್ತದ ಬೆಳೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆಗೆ ಅವಕಾಶವಾಗುತ್ತದೆ. ವಾಣಿಜ್ಯ ನಗರವಾಗಿರುವ ಗಂಗಾವತಿ ಭಾಗದಲ್ಲಿ ನೂರಾರು ಅಕ್ಕಿ ಗಿರಣಿಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಭತ್ತದ ಉತ್ಪನ್ನಗಳನ್ನು ರಾಜ್ಯ ,ಅಂತರ ರಾಜ್ಯ ಹಾಗೂ ವಿದೇಶಗಳಿಗೆ ಕಳುಹಿಸಲು ಅನುಕೂಲವಾಗುತ್ತದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಕಲಬುರ್ಗಿ ವಿಭಾಗದ ಅಭಿವೃದ್ಧಿಗೆ ಈ ನೂತನ ರೇಲ್ವೆ ಮಾರ್ಗ ರಚನೆಯು ಅಭಿವೃದ್ಧಿಗೆ ಪೂರಕವಾಗಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಕ್ಕೆ ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅದ್ಯಕ್ಷ ಅಶೋಕಸ್ವಾಮಿ ಹೇರೂರ ಸಂತಸ ವ್ಯಕ್ತಪಡಿಸಿದ್ದಾರೆ.