ಕೊಪ್ಪಳ:ಬೀದರ-ಕಲಬುರ್ಗಿ-ಬಳ್ಳಾರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆಯಲ್ಲಿ ರಸ್ತೆ ನಿರ್ಮಾಣ ಮಾಡಲು ರೂ.7650 ಕೋಟಿ ಹಣವನ್ನು ಮೀಸಲಿರಿಸಿರುವುದನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಸ್ವಾಗತಿಸಿದ್ದಾರೆ.
ಇದು ಕೊಪ್ಪಳ ಜಿಲ್ಲಾ ಮತ್ತು ಹೈದ್ರಾಬಾದ್ ಕರ್ನಾಟಕ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಗಳ ಬಹು ದಿನಗಳ ಒತ್ತಾಯವಾಗಿತ್ತು ಎಂದವರು ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ತಳಕಲ್-ಭಾನಾಪೂರ ಇಂಜಿನಿಯರಿಂಗ್ ಕಾಲೇಜ್ ನ್ನು ಐ.ಐ.ಟಿ. ಮಾದರಿಯಲ್ಲಿ ಅಭಿವೃದ್ಧಿ ಪಡಿಸುವುದು, ಮುನಿರಾಬಾದ್-ಗಿಣಿಗೇರಾ-ರಾಯಚೂರು ರೇಲ್ವೆ ಮಾರ್ಗಕ್ಕೆ 150 ಕೋಟಿ ಅನುದಾನ ನೀಡಿರುವುದಕ್ಕೆ ಹೇರೂರ ಸಂತೋಷ ವ್ಯಕ್ತ ಪಡಿಸಿದ್ದಾರೆ.