ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಔಷಧ ನಿಯಂತ್ರಣ ಇಲಾಖೆಯ ಒಬ್ಬ ಅಧಿಕಾರಿಗೆ ಕಡ್ಡಾಯ ನಿವೃತ್ತಿ,ಮತ್ತೊಬ್ಬರನ್ನು ವಜಾ ಗೊಳಿಸಿ ರಾಜ್ಯ ಸರಕಾರದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ತಿಳಿದು ಬಂದಿದೆ.
ಲೋಕಾಯುಕ್ತ ಟ್ರ್ಯಾಪ್ ಪ್ರಕರಣದಲ್ಲಿ ಇಲಾಖಾ ವಿಚಾರಣೆ ನಂತರ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಉಪ ಲೋಕಾಯುಕ್ತರು ಮಾಡಿರುವ ಶಿಫಾರಸ್ಸಿನಂತೆ ಸಹಾಯಕ ಔಷಧ ನಿಯಂತ್ರಕ ಗೋಪಾಲರಾವ್ ಹೆಚ್.ಭಂಡಾರೆ ಇವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿ ಗೊಳಿಸಿ,ನಿವೃತ್ತಿ ವೇತನವನ್ನು ಶೇಕಡಾ 25 ರಷ್ಟು ಶಾಶ್ವತವಾಗಿ ತಡೆಹಿಡಿಯುವ ದಂಡನೆ ಮತ್ತು ಶ್ರೀ ಮಂಜುನಾಥ ಔಷಧ ಪರಿವೀಕ್ಷಕರು ಇವರನ್ನು ಸರ್ಕಾರಿ ಸೇವೆಯಿಂದ ವಜಾ ಗೊಳಿಸಲು ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ. ಲೋಕಾಯುಕ್ತ ಟ್ರ್ಯಾಪ್ ಪ್ರಕರಣದಲ್ಲಿ ಸಹಾಯಕ ಔಷಧ ನಿಯಂತ್ರಕರಾದ ಗೋಪಾಲರಾವ್ ಭಂಡಾರೆ ಮತ್ತು ಔಷಧ ಪರಿವೀಕ್ಷರಾದ ಮಂಜುನಾಥ ರೂ.10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದರಿಂದ ಗೋಪಾಲರಾವ ಭಂಡಾರೆ ಅವರನ್ನು ಕಡ್ಡಾಯ ನಿವೃತ್ತಿಗೊಳಿಸಿ ಶೇ.25 ರಷ್ಟು ಪಿಂಚಣಿಯನ್ನು ಶಾಶ್ವತವಾಗಿ ತಡೆಹಿಡಿಯಲು ಮತ್ತು ಮಂಜುನಾಥ ರವರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡಲು ಪ್ರಸ್ತಾಪಿಸಲಾಗಿತ್ತು. ಅದರಂತೆ ಗೋಪಾಲ್ ರಾವ್ ಹೆಚ್. ಭಂಡಾರೆ, ಸಹಾಯಕ ಔಷಧ ನಿಯಂತ್ರಕರು ಇವರನ್ನು ಮತ್ತು ಮಂಜುನಾಥ ಎಸ್.ಎಸ್ ಔಷಧ ಪರೀವೀಕ್ಷಕ ಇವರನ್ನು ಕರ್ತವ್ಯದಿಂದ ವಜಾಗೊಳಿಸಿ,ಸರ್ಕಾರದ ಸಚಿವ ಸಂಪುಟ ನಿರ್ಣಯಿಸಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇಷ್ಟರಲ್ಲಿಯೇ ಸರಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ನೀಡಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.