ಗಂಗಾವತಿ:ಗಂಗಾವತಿ-ಬಾಗಲಕೋಟ್ ನೂತನ ರೇಲ್ವೆ ಮಾರ್ಗ ರಚಿಸಲು ಕೊಪ್ಪಳ ಸಂಸದ ಸಂಗಣ್ಣ ಕರಡಿ ಮತ್ತು ಬಾಗಲಕೋಟ ಸಂಸದ ಪಿ.ಸಿ.ಗದ್ದಿಗೌಡರ್ ಜಂಟಿಯಾಗಿ ರೇಲ್ವೇ ಸಚಿವ ಅಶ್ವಿನ್ ವೈಷ್ಣವ ಅವರಿಗೆ ಬುಧುವಾರ ಮನವಿ ಸಲ್ಲಿಸಿದ್ದಾರೆ.
ಈ ಹೊಸ ರೇಲ್ವೆ ಮಾರ್ಗ ರಚನೆಯಿಂದ ಕನಕಗಿರಿ, ಪುರ,ಬದಾಮಿ,ಆನೆಗುಂದಿ ಮತ್ತು ಹಂಪಿ ಐತಿಹಾಸಿಕ ಸ್ಥಳಗಳಿಗೆ ಪ್ರಯಾಣಿಸಲು ಅನುಕೂಲವಾಗುತ್ತದೆ ಹಾಗೂ ವಾಣಿಜ್ಯಿಕವಾಗಿ ಲಾಭದಾಯಕವಾಗಲಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಗಂಗಾವತಿ-ದರೋಜಿ ನೂತನ ರೇಲ್ವೆ ಮಾರ್ಗದ ಸರ್ವೇ ಕಾರ್ಯಕ್ಕಾಗಿ ಹಣ ಬಿಡುಗಡೆ ಮಾಡಿರುವುದಕ್ಕೆ ಸಚಿವರಿಗೆ ಕರಡಿ ಸಂಗಣ್ಣ ಸಚಿವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಮಾಹಿತಿಯನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅದ್ಯಕ್ಷ ಅಶೋಕಸ್ವಾಮಿ ಹೇರೂರ ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದು , ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ಅವರು ಸಹ ಹುಬ್ಬಳ್ಳಿ ರೇಲ್ವೆ ವಿಭಾಗದ ಮುಖ್ಯ ಸಂಚಾರಿ ಯೋಜನೆಯ ವ್ಯವಸ್ಥಾಪಕರು,ದರೋಜಿ-ಬಾಗಲಕೋಟ್ ನೂತನ ರೇಲ್ವೆ ಲೈನ್ ರಚನೆಯ ಬಗ್ಗೆ ಕ್ರಮ ಕೈಗೊಳ್ಳುವಂತೆ ದೆಹಲಿ ರೇಲ್ವೆ ಬೋರ್ಡ್ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಬರೆದಿರುವ ಪತ್ರವನ್ನು ಪತ್ರಿಕಾ ಪ್ರಕಟಣೆಗಾಗಿ ಬಿಡುಗಡೆ ಮಾಡಿದ್ದಾರೆ.